...

ಯಲ್ಲಾಪುರ ಸೆಪ್ಟೆಂಬರ್ 05 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಯಲ್ಲಾಪುರ ಸಹಯೋಗದಲ್ಲಿ ಹಮ್ಮಿಕೊಂಡ " ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮ "ದ ಜನ ಜಾಗೃತಿಯ " ಪೋಷಣ ರಥ " ಕ್ಕೆ ಹಸಿರು ನಿಶಾನೆ ತೋರುವ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ರೀಮತಿ ಶ್ಯಾಮಿಲಿ ಪಾಟಣಕರ್,ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್‌.ಆರ್.ಹೆಗಡೆ, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಶ್ರೀ ಜಗದೀಶ ಕಮ್ಮಾರ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

...
...