...

ಯಲ್ಲಾಪುರ ಸೆಪ್ಟೆಂಬರ್ 05 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ  ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಾ ಶಿಕ್ಷಕ ದಿನಾಚರಣೆ ಸಮಿತಿಯ ವತಿಯಿಂದ ಆಯೋಜಿಸಿದ್ದ " ಶಿಕ್ಷಕರ ದಿನಾಚರಣೆಯ ಗುರು ಗೌರವಾರ್ಪಣೆ " ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಾನ್ಯ ಸಚಿವರು, ತಾಲೂಕಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿ, ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ  ಅಂಕವನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ, ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ರೀಮತಿ ಶ್ಯಾಮಿಲಿ ಪಾಟಣಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್‌.ಆರ್.ಹೆಗಡೆ, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಶ್ರೀ ಜಗದೀಶ ಕಮ್ಮಾರ ಹಾಗೂ ತಾಲೂಕಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಅಧಿಕಾರಿಗಳು ಉಪಸ್ಥಿತರಿದ್ದರು.

...
...