...

ಯಲ್ಲಾಪುರ ಸೆಪ್ಟೆಂಬರ್ 06 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ತಿಲಕ್ ಚೌಕದಲ್ಲಿ ಸ್ಥಳೀಯ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಿರುವ ಶ್ರೀ ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ನಂತರ ತಿಲಕ್ ಚೌಕದ ಗಜಾನನೋತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅನ್ನಪ್ರಸಾದವನ್ನು ಬಡಿಸುವ ಕಾರ್ಯದಲ್ಲಿ ಪಾಲ್ಗೊಂಡು, ತಾವು ಸಹ ಭಕ್ತರೊಂದಿಗೆ ಸರತಿ ಸಾಲಿನಲ್ಲಿ ನಿಂತು ಅನ್ನ ಪ್ರಸಾದವನ್ನು ಸ್ವೀಕರಿಸಿದರು.
 
ಈ ಸಂದರ್ಭದಲ್ಲಿ ತಿಲಕ್ ಚೌಕ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ನಾಯಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಗಣಪತಿ ಮುದ್ದೇಪಾಲ್, ಮಂಡಲ ಉಪಾಧ್ಯಕ್ಷರಾದ ಶ್ರೀ ಶಿರಿಷ್ ಪ್ರಭು, ಖಜಾಂಚಿ ಶ್ರೀ ಮುರಳಿ ಹೆಗಡೆ ಹಾಗೂ ಸ್ಥಳೀಯ ಪ್ರಮುಖರು ಗಜಾನನೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

...
...