...

ಮುಂಡಗೋಡ ಸೆ, 10 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅಂಗವಾಗಿ ತಾಲೂಕಿನ ನ್ಯಾಸರ್ಗಿಯ ಬ್ರಹ್ಮಶ್ರೀ ನಾರಾಯಣಗುರು ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶ್ರೀ ರವಿಗೌಡ ಪಾಟೀಲ್,  ಶ್ರೀ ಎಲ್.ಟಿ.ಪಾಟೀಲ್, ಪ.ಪಂ ಅಧ್ಯಕ್ಷರಾದ ಶ್ರೀಮತಿ ಜಯಸುಧಾ ಭೋವಿ ಹಾಗೂ ನಾರಾಯಣಗುರು ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

...

.