...

ಮುಂಡಗೋಡ ಸೆ, 10 : ತಾಲೂಕಾಡಳಿತ ವತಿಯಿಂದ ನಾರಾಯಣಗುರು ಜಯಂತಿ ಅಂಗವಾಗಿ ತಾಲೂಕಿನ ನ್ಯಾಸರ್ಗಿಯ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ.

ಸಮಾಜ ಸೇವೆಯಲ್ಲಿ ಸುದೀರ್ಘವಾಗಿ ಸೇವೆಸಲ್ಲಿಸಿರುವ ಹಿರಿಯರಿಗೆ ಸಚಿವರು ಶಾಲು ಹೊದಿಸಿ ಸನ್ಮಾನಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶ್ರೀ ರವಿಗೌಡ ಪಾಟೀಲ್,  ಶ್ರೀ ಎಲ್.ಟಿ.ಪಾಟೀಲ್, ಪ.ಪಂ ಅಧ್ಯಕ್ಷರಾದ ಶ್ರೀಮತಿ ಜಯಸುಧಾ ಭೋವಿ ಹಾಗೂ ನಾರಾಯಣಗುರು ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

...