...

ಮುಂಡಗೋಡ ಸೆ, 09 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬೆಡ್ಸಗಾಂವ್ ಗ್ರಾಮ ಪಂಚಾಯತ ವ್ಯಾಪ್ತಿಯ ಕುರ್ಲಿ, ಜಳಗೇರಿ, ಬೆಕ್ಕೋಡ್ ಗ್ರಾಮಕ್ಕೆ ಭೇಟಿ ನೀಡಿದರು.

ಸ್ಥಳೀಯ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ಅಹವಾಲನ್ನು ಸ್ವೀಕರಿಸಿ, ಗ್ರಾಮದ ಅಭಿವೃದ್ಧಿಯ ಕುರಿತಂತೆ ಗ್ರಾಮಸ್ಥರೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಶ್ರೀ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶ್ರೀ ಎಲ್.ಟಿ.ಪಾಟೀಲ್, ಪ್ರಮುಖರಾದ ಶ್ರೀ ಉಮೇಶ್ ಬಿಜಾಪುರ , ಶ್ರೀ ಪ್ರಕಾಶ ನಾಯ್ಕ , ಶ್ರೀ ಸತೀಶ್ ನಾಯ್ಕ ಹಾಗೂ ಗ್ರಾಮ ಪಂಚಾಯತ ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

...

.

...

.