...

ಬೆಂಗಳೂರು ಸೆ, 12 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯಾಲಯದ ಸಭಾಂಗಣದಲ್ಲಿ ಮಂಡಳಿಯ 37 ನೇ ಸಭೆ ನಡೆಯಿತು.

ಮಂಡಳಿಯ ವತಿಯಿಂದ ನಾಡಿನ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಆರಂಭಿಸಲಾಗಿರುವ ಪೈಲಟ್ ತರಬೇತಿ ಯೋಜನೆ ಬಗ್ಗೆ ಹಾಗೂ ನೋಂದಾಯಿತರಲ್ಲದ ವಲಸೆ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೊಳಗಾಗಿ ಮೃತಪಟ್ಟರೆ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ ಹಾಗೂ ಕಕ ಮತ್ತು ಇನಿಕಾಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಗುರುಪ್ರಸಾದ್ ಎಂಪಿ ಉಪಸ್ಥಿತರಿದ್ದರು.

...

.

...

.