...

ಬೆಂಗಳೂರು ಸೆ, 20 : ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರ ತಾಲೂಕಿನ ಕಳಚೆ ಭೂ ಕುಸಿತದಿಂದ ಹಾನಿಗೊಳಗಾದ ಪ್ರದೇಶದ ಪ್ರಮುಖರೊಂದಿಗೆ ಭೇಟಿಯಾದರು.

ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, 2021 ರ ಜುಲೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಳೆಚೆ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿ ಮನೆಗಳಿಗೆ, ಕೃಷಿ ಭೂಮಿ ಹಾಗೂ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ ಕಳಚೆ ಗ್ರಾಮದ 667 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಅನುಮತಿ ನೀಡುವಂತೆ ಹಾಗೂ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಅಥವಾ ಬೇರೆ ಯಾವುದೇ ಅನುದಾನದಡಿ ಪುನರ್ವಸತಿ ಕಲ್ಪಿಸಲು ಅನುದಾನ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಉಮೇಶ್ ಭಾಗ್ವತ್, ಮಂಡಲ ಉಪಾಧ್ಯಕ್ಷರಾದ ಶ್ರೀ ವೆಂಕಟರಮಣ ಬೆಳ್ಳಿ, ಗ್ರಾಮ ಪಂಚಾಯತ ಸದಸ್ಯರು ಹಾಗೂ ಪುನರ್ವಸತಿ ಸಮಿತಿಯ ಪ್ರಮುಖರಾದ ಶ್ರೀ ಗಜಾನನ ಭಟ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

...

.