...

ಬೆಂಗಳೂರು ಸೆ,20 :  ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ " ಕಾರ್ಮಿಕ ಇಲಾಖೆಯ ನೂತನ ತಂತ್ರಾಂಶ ಉದ್ಘಾಟನೆ ಹಾಗೂ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಮತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ "  ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.

ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿಗಳೊಂದಿಗೆ ಕಾರ್ಮಿಕ ಇಲಾಖೆಯ ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ, ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಅನ್ನು ಸಾಂಕೇತಿಕವಾಗಿ ವಿತರಿಸಿದರು ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. 

ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವರಾದ ಶ್ರೀ ಮುರುಗೇಶ ನಿರಾಣಿ, ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ ಹಾಗೂ ಕಕ ಮತ್ತು ಇನಿಕಾಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಗುರುಪ್ರಸಾದ್ ಎಂ ಪಿ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತಿದ್ದರು.

...

.

...

.