...

ಮುಂಡಗೋಡ ನ.10 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬುಧವಾರ ಮುಂಡಗೋಡದಲ್ಲಿ ಪಕ್ಷದ ಪ್ರಮುಖರ ಹಾಗೂ ಕಾರ್ಯಕರ್ತರೊಂದಿಗೆ ಸಂಘಟನಾತ್ಮಕ ಸಭೆ ನಡೆಸಿದರು.

ಬೂತ್ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷವನ್ನು ಸಂಘಟಿಸುವ ಬಗ್ಗೆ ಸಚಿವರ ಕಾರ್ಯಕರ್ತರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಭೆಯಲ್ಲಿ ಯುವ ನಾಯಕರಾದ ವಿವೇಕ್ ಹೆಬ್ಬಾರ್, ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ್ರಮುಖರಾದ ದೇವು ಪಾಟೀಲ್, ವೈ.ಪಿ.ಪಾಟೀಲ್, ಗುಡ್ಡಪ್ಪ ಕಾತೂರ, ಸಿದ್ದಪ್ಪ ಹಡಪದ ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

...

.

...

.