...

ಮುಂಡಗೋಡ ನ. 11 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಭಕ್ತಶ್ರೇಷ್ಠ ಶ್ರೀ ಕನಕದಾಸ ಹಾಗೂ ವೀರರಾಣಿ ಒನಕೆ ಓಬವ್ವ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮಾನ್ಯ ಸಚಿವರು ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಪ್ರಮುಖರಾದ ಗುಡ್ಡಪ್ಪ ಕಾತೂರ, ವೈ.ಟಿ.ಪಾಟೀಲ್, ಜಗದೀಶ್ ಕುರುಬರ ಹಾಗೂ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.

...

.

...

.