...

ಯಲ್ಲಾಪುರ ನ. 14 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಳಲಗಾಂವ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಗೆ ಸುಮಾರು 27.79 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ನೇತ್ರಾವತಿ ಹೆಗಡೆ, ಗ್ರಾಮ ಪಂಚಾಯತ ಸದಸ್ಯರಾದ ಆರ್.ಎಸ್.ಭಟ್, ಅಶೋಕ ಮರಾಠಿ, ಸುಭಾಷ್ ಮರಾಠಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಆರ್.ಹೆಗಡೆ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

...

.

...

.